ಸತತ 14ನೇ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಮುಖ್ಯಾಂಶಗಳು ಇಂತಿವೆ

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿ ಮುಖ್ಯಮಂತ್ರಿ ಪಟ್ಟಕ್ಕೇರಿದ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಪೂರೈಕೆಗಾಗಿ ಬಜೆಟ್ ನ ಗಾತ್ರವನ್ನು 18,565 ಕೋಟಿ ರೂ ಹೆಚ್ಚಳ ಮಾಡಲಾಗಿದೆ. ಈ ಬಾರಿ 3,27,747 ಕೋಟಿ ರೂ ಗಾತ್ರದ ಬಜೆಟ್ ಮಂಡನೆಯಾಗಿದೆ. ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಜಾರಿಗೆ ಐದು ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹ ಲಕ್ಷ್ಮಿ ಯೋಜನೆ – […]
ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೋಮವಾರದಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಚೇರಿಯ ಸಿಬ್ಬಂದಿಗಳು ಶಾಸಕರ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಯಾವುದೇ ಕೆಲಸ ಮಾಡಲು 30 ಲಕ್ಷ ರೂ.ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಬಗ್ಗೆ ಸುಳಿವು ನೀಡಿದ ಅವರು ಈ ಸರ್ಕಾರದಲ್ಲಿ ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ. ಒಂದೊಂದು ಇಲಾಖೆಯಲ್ಲಿ ಒಂದೊಂದು ಸಿಂಡಿಕೇಟ್ ಇರುತ್ತದೆ. ಯಾರನ್ನು […]
10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]
ಬೆಲೆ ಏರಿಕೆಯ ಬರೆಯ ಮಧ್ಯೆ ನಂದಿನ ಹಾಲಿನ ದರ ಏರಿಕೆ ಹೊರೆ: ದರ ಪರಿಷ್ಕರಣೆಗೆ ಹಾಲು ಒಕ್ಕೂಟಗಳ ಪಟ್ಟು

ಬೆಂಗಳೂರು: ದಿನಬಳಕೆಯ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಏರಿಕೆಯ ಆಘಾತದ ಬೆನ್ನಲ್ಲೇ ನಂದಿನಿ ಹಾಲಿನ ದರವೂ ಲೀಟರಿಗೆ 5 ರೂ. ಏರುವ ಭಯ ಗ್ರಾಹಕರಲ್ಲಿ ಶುರುವಾಗಿದೆ. ನಂದಿನ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಈ ಹಿಂದೆ ಬೊಮ್ಮಾಯಿ ಸರ್ಕಾರದ ಸಂಧರ್ಭದಲ್ಲಿಯೂ ಹಾಲಿನ ದರ ಏರಿಕೆ ಬಗ್ಗೆ ಒಕ್ಕೂಟಗಳು ಮನವಿ ಮಾಡಿದ್ದವು. ಬೊಮ್ಮಾಯಿ ಸರ್ಕಾರ ಲೀಟರಿಗೆ 2 ರೂ ಏರಿಕೆ ಮಾಡುವಂತೆ ಒಪ್ಪಿಗೆ ನೀಡಿತ್ತು. ಇದೀಗ ಸರಕಾರ ಬದಲಾಗಿದ್ದು, ದರ […]
ಮಂಗಳೂರು: ಅನ್ನಭಾಗ್ಯಕ್ಕೆ ಅಕ್ಕಿ ನಿರಾಕರಣೆ ಆರೋಪಿಸಿ ಮಂಗಳೂರಿನಲ್ಲಿ ಅನ್ನದ ತಟ್ಟೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧದ ಎದುರು ‘10 ಕೆಜಿ ಉಚಿತ ಅಕ್ಕಿ’ ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಕಿ ತಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ಪೂರೈಸುವ ತನ್ನ ಪ್ರಮುಖ ಕಾರ್ಯಕ್ರಮಕ್ಕೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ, ಬಳಿಕ ಕೇಂದ್ರದ ಒತ್ತಡಕ್ಕೆ ಮಣಿದು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಪ್ರತಿಭಟನಾಕಾರರು […]