ಲಘು ನ್ಯುಮೋನಿಯಾ ಲಕ್ಷಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ರಾತ್ರಿ ಲಘು ನ್ಯುಮೋನಿಯಾ ಲಕ್ಷಣಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಐಸಿಯುನಲ್ಲಿರುವ ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರ ಉಸಿರಾಡಲು ಅನುಕೂಲವಾಗುವಂತೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. ಆಕೆ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ ಆಸ್ಪತ್ರೆ ಹಳೆ ವಿಮಾನ ನಿಲ್ದಾಣ ರಸ್ತೆಯ ಪಲ್ಮನಾಲಜಿ ಸಮಾಲೋಚಕ ಡಾ.ಗುರುಪ್ರಸಾದ್ ಭಟ್ ಚಿಕಿತ್ಸೆ ನೀಡುತ್ತಿದ್ದಾರೆ […]

ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ […]

ಆಗಸ್ಟ್ 1 ರಂದು ಗೃಹ ಜ್ಯೋತಿ; ಆಗಸ್ಟ್ 17 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಬಹುನಿರೀಕ್ಷಿತ ಕಾಂಗ್ರೆಸ್ ಗ್ಯಾರಂಟಿಯ ಐದು ಯೋಜನೆಗಳ ಅಧಿಕೃತ ಜಾರಿಗೆ ಕ್ಷಣಗಣನೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ‘ಗೃಹ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಗೆ ಚಾಲನೆ ನೀಡಿದರೆ, ಆಗಸ್ಟ್ 17 ಅಥವಾ 18 ರಂದು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ಸಹಾಯವನ್ನು ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಕಾಂಗ್ರೆಸ್‌ನ ಐದು ಚುನಾವಣಾ ಗ್ಯಾರಂಟಿಗಳ ಭಾಗವಾಗಿರುವ ಎರಡೂ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು […]

ವಚನಭ್ರಷ್ಟ ಕಾಂಗ್ರೆಸ್ ಸರಕಾರದ ಸುಳ್ಳು ಗ್ಯಾರಂಟಿ ವಿರುದ್ದ ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ […]

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಯಾವ ನಗರದಲ್ಲಿ ಎಷ್ಟು ಹೆಚ್ಚಳ ತಿಳಿದುಕೊಳ್ಳಿ

ಬೆಂಗಳೂರು: ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನಿಂದ ಆಗುವ ನಷ್ಟವನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದೆ ಎನ್ನಲಾಗಿದ್ದು, ಇದರ ವಿರುದ್ದ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗರಿಕರು ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಾಗ 200 ಯೂನಿಟ್‌ಗಳಿಗಿಂತ ಹೆಚ್ಚಿನ ಸ್ಲ್ಯಾಬ್‌ ಹೊಂದಿದವರಾಗಿದ್ದರೆ ಈ ತಿಂಗಳು ಪ್ರತಿ ಯೂನಿಟ್‌ಗೆ 2.89 ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಮತ್ತು […]