ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ಯೋಜನೆಯ ಅರ್ಹತೆ ಮತ್ತು ಮಾನದಂಡಗಳು ಇಂತಿವೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 […]

ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನ: ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾದ ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರನ್ನು ಸಂಪುಟ ಸಚಿವರ ದರ್ಜೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ಬುಧವಾರ ನೇಮಿಸಲಾಗಿದೆ. ಸುನಿಲ್ ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ.  ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿರುವ ಸುನಿಲ್ ಅಲ್ಲೇ  ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.  ಮೂಲತಃ ತೆಲುಗು ಭಾಷಿಕರಾಗಿದ್ದರೂ, ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈ ಹಿಂದೆ ಬಿಜೆಪಿ, ಡಿಎಂಕೆ, […]

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.  

24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ […]