ಬಸ್ ನಲ್ಲಿ ಟಿಕೆಟ್ ಕೊಳ್ಳಲು ಮಹಿಳೆಯರ ಹಿಂದೇಟು: ರಾಜ್ಯ ಸಾರಿಗೆ ಸಿಬ್ಬಂದಿಗಳ ಪರದಾಟ; ಸಿಎಂಗೆ ಪತ್ರ

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಅನ್ನು ಕಾಂಗ್ರೆಸ್ ಪಕ್ಷವು ನೀಡಿದ್ದು, ಇದೀಗ ಮಹಿಳೆಯರು ಬಸ್ ಪ್ರಯಾಣದ ಸಂದರ್ಭದಲ್ಲಿ ಟಿಕೆಟ್ ಕೊಳ್ಳಲು ನಿರಾಕರಣೆ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಮಹಿಳೆಯರಿಂದ ಟಿಕೆಟ್ ಶುಲ್ಕವನ್ನು ಪಡೆಯಲು ಸಾರಿಗೆ ಸಿಬ್ಬಂದಿಗಳು ಹರಸಾಹಸ ಪಡಬೇಕಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಎಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ […]
ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳು ಅನ್ವಯ: ಕೊಟ್ಟ ಭರವಸೆ ಈಡೇರಿಸಿ ಎಂದ ವಿರೋಧ ಪಕ್ಷದ ನಾಯಕರು

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳಿಗೆ ಷರತ್ತುಗಳು ಅನ್ವಯವಾಗಿದ್ದು, ಈ ಬಗ್ಗೆ ವಿರೋಧ ಪಕ್ಷ, ಬಿಜೆಪಿಯ ನಾಯಕರು ಸರಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ವಿದ್ಯುತ್ ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ […]