ಕರಡು ವರದಿಗೆ ಸಂಸದೀಯ ಸ್ಥಾಯಿ ಸಮಿತಿ ತಡೆ: ಹೊಸ ಕ್ರಿಮಿನಲ್​ ಕಾನೂನು ಮಸೂದೆ

ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ​, ಸಿಆರ್​ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ ಸೇರಿ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳ ಕರಡು ವರದಿಯನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು  ಶುಕ್ರವಾರ ತಡೆಹಿಡಿದಿದೆ. ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ-2023 ಮಸೂದೆಗಳ ಕರಡು ವರದಿಯನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ತಡೆಹಿಡಿದಿದೆ. ಈ ಮೂರು ಮಸೂದೆಗಳ ಕರಡು ವರದಿಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪರಿಶೀಲನೆಗೆ ವಹಿಸಲಾಗಿದೆ. […]