ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, […]

ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರದಂದೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ?

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿದ್ದು, ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಿಎಂ ಆಯ್ಕೆ ಸರ್ಕಸ್ ಬಳಿಕ ಕೈ ಪಾಳಯದಲ್ಲಿ ಸಚಿವ ಸಂಪುಟ ಕಸರತ್ತು ಶುರುವಾಗಿದ್ದು, ಹಲವು ಶಾಸಕರು ನೂತನ ಸಚಿವ ಸಂಪುಟ ಸೇರುವ ಆಶಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಜಿಲ್ಲೆ, ತಮ್ಮ ಜಾತಿಗೆ ಹೆಚ್ಚು ಸಚಿವ […]

ನಾಳೆ ಮುಖ್ಯಮಂತ್ರಿ ಪದಗ್ರಹಣ: ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ

ನವದೆಹಲಿ: ಮೇ 20 ರಂದು ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಹೇಮಂತ್ […]

ಕೃಷ್ಣ ಮಠಕ್ಕೆ ಭೇಟಿ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

ಉಡುಪಿ: ಮಹಾರಾಷ್ಟ್ರಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಬಿ.ಜೆ.ಪಿ.ಯ ಉದಯಕುಮಾರ್ ಶೆಟ್ಟಿ, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ವಾಸುದೇವ ಪೆರಂಪಳ್ಳಿ, ಮೊದಲಾದವರು ಉಪಸ್ಥಿತರಿದ್ದರು.

ಜ.12 ರ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿ: ಕುಯಿಲಾಡಿ

ಉಡುಪಿ: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದರವರ ಜನ್ಮ ದಿನ ಜನವರಿ12. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. […]