ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]
ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ
ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]
ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]
ಪ್ರವೀಣ್ ಹತ್ಯೆ ಪ್ರಕರಣ ಎನ್.ಐ.ಎ ಗೆ ಹಸ್ತಾಂತರ: ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನ ಎನ್.ಐ.ಎಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಂಡಿರೋದಾಗಿ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ವ್ಯವಸ್ಥಿತ ಸಂಚು, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ.ಎ ಗೆ ಪತ್ರ ಬರೆಯಲು ಹೇಳಿದ್ದೇನೆ. ಪ್ರಕರಣವನ್ನ ಎನ್ ಐ […]
ಬಿಜೆಪಿ ಮುಖಂಡನ ಅಮಾನವೀಯ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ . ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ […]