ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ:  ಸಿಎಂ ಕುಮಾರಸ್ವಾಮಿ

ಕುಂದಾಪುರ: ಕರಾವಳಿಯಲ್ಲಷ್ಟೆ ಅಲ್ಲ. ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ. ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳು ಮೈತ್ರಿ ಪಾಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಸಂಜೆ ಇಲ್ಲಿನ ನೆಹರೂ ಮೈದಾನದಲ್ಲಿ ಜಾತ್ಯಾತೀತ ಜನತಾ ದಳ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಮಹಿಳಾ ಮೀನುಗಾರರ ಸಮಾವೇಶಕ್ಕೆ ಆಗಮಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಅಭ್ಯರ್ಥಿಗಳಿಗೆ ತಮ್ಮ ಸಾಧನೆಗಳನ್ನು ಹೇಳಿ ಮತ ಕೇಳಲು ಆಗುತ್ತಿಲ್ಲ. […]