ಜೂನ್ 4 ರಂದು ಕೋಸ್ಟಲ್ ಫಿಲ್ಮ್ ಅವಾರ್ಡ್ ಪ್ರದಾನ ಸಮಾರಂಭ

ಮಂಗಳೂರು: ತುಳು ಸಿನೆಮಾ ರಂಗದ ಕೋಸ್ಟಲ್ ಫಿಲ್ಮ್ ಅವಾರ್ಡ್ ಪ್ರದಾನ ಸಮಾರಂಭ ಜೂನ್ 4 ರಂದು ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕ ಸಂದೇಶ್‌ ರಾಜ್‌ ಬಂಗೇರ ಹೇಳಿದರು. ಅವರು ನಗರದ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಚಿತ್ರಗಳನ್ನು ಪ್ರಶಸ್ತಿಗೆ ಪರಿಗಣಿಸಲಿದ್ದೇವೆ. ಒಟ್ಟು 28 ವರ್ಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಒಟಿಟಿಗಳಲ್ಲಿ ಮಾತ್ರ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸುವುದಿಲ್ಲ. ಜೀವಮಾನ ಸಾಧನೆ ಪ್ರಶಸ್ತಿ, ತೀರ್ಪುಗಾರರ […]