ನ.24 ರವರೆಗೆ ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನ.24 ರವರೆಗೆ ಕರ್ನಾಟಕದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರು, ಉಡುಪಿ, ದ.ಕ, ಉ.ಕ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದಿಂದ ದಕ್ಷಿಣ ಕರ್ನಾಟಕದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ ವರ್ಷಾರಂಭದಿಂದಲೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಮುಂದಿನ ವರ್ಷದ ಜನವರಿ 1 ರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪಡಿತರ ಮೂಲಕ ಕುಚ್ಚಲಕ್ಕಿಯನ್ನು ನೀಡುವಂತೆ ಕರಾವಳಿಗರು ಬಹು ದಿನಗಳಿಂದ ಬೇಡಿಕೆ ಇಟ್ಟಿದ್ದು, ಇದನ್ನು ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಭೇಟಿ ಸಂದರ್ಭದಲ್ಲಿ ಈ ಕುರಿತು ಘೋಷಣೆ ಮಾಡಿದ್ದರು. […]
ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ
ಉಡುಪಿ: ನ.4 ಮತ್ತು 5 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಜೊತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿಗೆ ಮತ್ತೆ ಮರುಕಳಿಸಿದ ವರುಣ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಉಡುಪಿ/ಮಂಗಳೂರು: ವಾರಾಂತ್ಯದಲ್ಲಿ ದಕ್ಷಿಣ ಭಾರತದಲ್ಲಿ ಕಾಣಿಸಿಕೊಂಡ ವರುಣ ಕೃಪೆಯು ಈ ವಾರವೂ ಮುಂದುವರಿಯುವ ಸಾಧ್ಯತೆಯಿದೆ ಮತ್ತು ಈ ಆರ್ದ್ರ ಪರಿಸ್ಥಿತಿಗಳು ಕನಿಷ್ಠ ಶುಕ್ರವಾರದವರೆಗೆ ಉಳಿಯಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಗುರುವಾರ ಮತ್ತು ಶುಕ್ರವಾರದಂದು ದಕ್ಷಿಣ ಆಂತರಿಕ ಕರ್ನಾಟಕದಲ್ಲಿ 64.5 ಮಿಮೀ ನಿಂದ115.5 ಮಿಮೀ ವರೆಗೆ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 20 ಮತ್ತು 21 ರಂದು ಕರಾವಳಿ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. […]
ಮುಂದಿನ ಎರಡು ದಿನ ಕರಾವಳಿಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆ
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಎರಡು ದಿನ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಅ.1 ರಂದು 64.5ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.