ರಾಜ್ಯದಲ್ಲಿ ಇಂದಿನಿಂದ ಮತ್ತೆ 4 ದಿನ ಭಾರೀ ಮಳೆ: 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ
ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಈ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಮಳೆ ಆರ್ಭಟ ಕಡಿಮೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ಸುಧಾರಿಸಲಿದೆ. ಜೊತೆಗೆ ಮಲೆನಾಡು ಭಾಗದಲ್ಲಿ ಮತ್ತೆರಡು ದಿನ ಮಳೆ ಸುರಿಯುವ ಸಾಧ್ಯತೆ ಇದ್ದು, ಉತ್ತರ ಒಳನಾಡಲ್ಲಿ ಮಳೆಯಾಗಲಿದೆ. ಕರ್ನಾಟಕ […]
ಆಗಸ್ಟ್ 2 ರಿಂದ 6 ರವರೆಗೆ ಗುಡುಗು ಸಿಡಿಲಿನ ಸಹಿತ ಅಧಿಕದಿಂದ ಅತ್ಯಾಧಿಕ ಮಳೆಯ ಮುನ್ಸೂಚನೆ
ಉಡುಪಿ/ಮಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು ಸಿಡಿಲಿನ ಅಬ್ಬರದ ಸಹಿತ ಅತ್ಯಾಧಿಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 3 ರಿಂದ 6 ರವರೆಗೆ 115.6 ಮಿಮಿ ನಿಂದ 204.4 ಮಿಮಿ ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಸಮುದ್ರವೂ ಪ್ರಕ್ಷುಬ್ದವಾಗಲಿರುವ ಹಿನ್ನೆಯಲ್ಲಿ ಮೀನುಗಾರರು ನೀರಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
2024 ರೊಳಗೆ 67956 ಕಿ.ಮೀ. ಉದ್ದದ ರೈಲು ಮಾರ್ಗ ವಿದ್ಯುತ್ತೀಕರಣ ಯೋಜನೆ: ಶೋಭಾ ಕರಂದ್ಲಾಜೆ
ಉಡುಪಿ: ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ […]
ಜೂನ್ 1 ರಿಂದ ಜುಲೈ 31 ರ ವರೆಗೆ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ […]
ಮೇ 17 ರಿಂದ 21ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಉಡುಪಿ: ಕರ್ನಾಟಕ ಕರಾವಳಿಯ ವಿವಿಧ ಭಾಗಗಳಲ್ಲಿ ಮೇ 17 ರಿಂದ 21ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉದ್ದಕ್ಕೂ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮೇ 19 ರಂದು 205 ಮಿಮೀ, ಮೇ 18 ಮತ್ತು 20 ರಂದು 115 ಮಿಮೀ ಹಾಗೂ ಮೇ 17 ಮತ್ತು […]