ಹವಾಮಾನ ಇಲಾಖೆ ಮುನ್ಸೂಚನೆ:ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ:
ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳವರೆಗೆ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿಮೀಯಿಂದ 60 ಕಿ. ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಮುಂಗಾರು ಮಳೆ ವಿಳಂಬವಾಗಿದ್ದು, ರಾಜ್ಯದ ರೈತರನ್ನು ಚಿಂತೆಗೀಡು ಮಾಡಿದೆ. ಹೊಲಗಳನ್ನು ಬಿತ್ತನೆಗೆ ಅಣಿಗೊಳಿಸಿರುವ ಅನ್ನದಾತರು ಬೀಜ, ಗೊಬ್ಬರ ಖರೀದಿಸಿ ಆಕಾಶದತ್ತ ಮುಖ ಮಾಡಿ ಮಳೆರಾಯನ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದೀಗ […]