ಮುಂದುವರಿದ ವರುಣಾರ್ಭಟ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್
ಬೆಂಗಳೂರು: ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನಗಳ ಕಾಲ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಬಳಿಕ ಜುಲೈ 25 ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಜುಲೈ 24 ರಂದು ಹೆಚ್ಚು ಮಳೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಡಲಾಗಿದೆ. ಧಾರವಾಡ […]