ಕೋಳಿ ಶೀತ ಜ್ಚರ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಮಾ.17: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋಳಿ ಶೀತ ಜ್ವರದ ಕಣ್ಗಾವಲಿನ ಕ್ರಮ ಕೈಗೊಳ್ಳುವ ಸರ್ವೇಕ್ಷಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಳಿಶೀತ ಜ್ವರವು ಈಗಾಗಲೇ ಮೈಸೂರು ಮತ್ತು ದಾವಣಗೆರೆಯಲ್ಲಿ ಕಂಡು ಬಂದಿದ್ದು,    ಜಿಲ್ಲೆಯ ಕೋಳಿ ಮಾರಾಟಗಾರರು, ಈ ಜಿಲ್ಲೆಗಳಿಂದ ಕೋಳಿಗಳನ್ನು ತರಿಸದಂತೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋಳಿ […]

ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೋಳಿ ಮರಿಗಳು ಲಭ್ಯ

ಉಡುಪಿ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುಮಾರು 500 ಗಿರಿರಾಜ ಕೋಳಿ ಮರಿಗಳು ಲಭ್ಯವಿದ್ದು, ಆಸಕ್ತರು ಖರೀದಿಸಬಹುದಾಗಿದೆ. ಕೋಳಿಯ ಮಾರಾಟ ಸ್ಟಾಕ್ ಇರುವವರೆಗೂ ಮಾತ್ರ ಲಭ್ಯವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2563923 ಅನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.