‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ಪಾಂಡ್ಯ, ರಾಹುಲ್‌ಗೆ ₹ 20 ಲಕ್ಷ ದಂಡ

ನವದೆಹಲಿ: ಟಿವಿ ರಿಯಾಲಿಟಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್‌ ತಂಡದ ಆಟಗಾರರಾದ ಹಾರ್ದಿಕ್‌ ಪಾಂಡ್ಯ ಹಾಗೂ ಕೆ.ಎಲ್‌.ರಾಹುಲ್‌ ಅವರಿಗೆ ಬಿಸಿಸಿಐ ತಲಾ ₹ 20 ಲಕ್ಷ ದಂಡ ವಿಧಿಸಿದೆ. ಒಂಬುಡ್ಸ್‌ಮನ್ ಡಿ.ಕೆ.ಜೈನ್‌ ಅವರು ಈ ಆದೇಶ ಹೊರಡಿಸಿದ್ದು, ₹ 10 ಲಕ್ಷವನ್ನು ಅರೆ ಸೇನಾಪಡೆಯ ಹುತಾತ್ಮ ಯೋಧರ ಪತ್ನಿಯರ ಕಲ್ಯಾಣಕ್ಕಾಗಿ ನೀಡಬೇಕು. ಉಳಿದ ₹ 10 ಲಕ್ಷವನ್ನು ಅಂಧರ ಕ್ರಿಕೆಟ್‌ ಸಂಸ್ಥೆಯ ನಿಧಿಗೆ ನೀಡಬೇಕು ಎಂದು ಸೂಚಿಸಿದ್ದು,  ನಾಲ್ಕು ವಾರದೊಳಗಾಗಿ ದಂಡ […]