ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿ ಜೂ. 30 ರವರೆಗೆ ವಿಸ್ತರಣೆ
ಉಡುಪಿ, ಜೂನ್ 11: 2019-20 ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ. ಶಾಲಾ […]
ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ
ಉಡುಪಿ, ಮೇ 27: 2018-19 ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ/ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂತರರಾಷ್ಟ್ರ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಕಂಚಿನ ಪದಕ ವಿಜೇತರಾದವರು ಹಾಗೂ ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಕಚೇರಿಯವೆಬ್‍ಸೈಟ್ http://serviceonline.gov.in/Karnataka ಮೂಲಕ […]
ಮೇ 26: ಗಂಗೊಳ್ಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ಸ್ ಪುಸ್ತಕ ವಿತರಣೆ
ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಸಮಾರಂಭ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಮೇ 26ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.