ಏಷ್ಯಾಕಪ್: ಸೆಪ್ಟೆಂಬರ್ 2ರಂದು ಭಾರತ vs ಪಾಕ್ ಪಂದ್ಯ, ಕೊಲಂಬೊ ತಲುಪಿದ ರೋಹಿತ್ ಬಳಗ!
ಕೊಲಂಬೊ (ಶ್ರೀಲಂಕಾ): ಪಾಕಿಸ್ತಾನದ ಮುಲ್ತಾನ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನೇಪಾಳ ಮತ್ತು ಪಾಕಿಸ್ತಾನದ ನಡುವೆ ಉದ್ಘಾಟನಾ ಪಂದ್ಯ ನಡೆಯುತ್ತಿದೆ.ಇನ್ನೊಂದೆಡೆ, ಕಳೆದ 6 ದಿನಗಳಿಂದ ಏಷ್ಯಾಕಪ್ ಮತ್ತು ವಿಶ್ವಕಪ್ ಹಿನ್ನೆಲೆಯಲ್ಲಿ ಬೆಂಗಳೂರಿನ ಆಲೂರಿನಲ್ಲಿ ಕಠಿಣ ಅಭ್ಯಾಸ ನಡೆಸಿದ ಭಾರತ ಕ್ರಿಕೆಟ್ ತಂಡ ಇಂದು ಶ್ರೀಲಂಕಾ ದೇಶಕ್ಕೆ ತೆರಳಿದೆ. ಸೆಪ್ಟೆಂಬರ್ 2ರಂದು ನಡೆಯುವ ಭಾರತ-ಪಾಕಿಸ್ತಾನ ನಡುವಣ ಪಂದ್ಯಕ್ಕೆ ಕೋಟ್ಯಂತರ ಕ್ರಿಕೆಟ್‌ಪ್ರೇಮಿಗಳು ಕಾತರದಿಂದ ಕಾದು ಕುಳಿತಿದ್ದಾರೆ.ಬೆಂಗಳೂರಿನ ಎನ್ಸಿಎಯಲ್ಲಿ ಕಠಿಣ ಅಭ್ಯಾಸ ನಡೆಸಿದ ಭಾರತ ಕ್ರಿಕೆಟ್ ತಂಡ ಇಂದು ಏಷ್ಯಾಕಪ್ ಟೂರ್ನಿಗಾಗಿ ಶ್ರೀಲಂಕಾ […]