ಜಿಲ್ಲೆಯ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧನೆ: ಸಚಿವ ಎಸ್.ಅಂಗಾರ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ.98 ರಷ್ಟು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಜಿಲ್ಲೆಯ ನಾಗರೀಕರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲಾಗಿದ್ದು, ಮಾರ್ಚ್ ಮಾಹೆಯ ಒಳಗೆ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಟಪಾಡಿಯಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ […]