ದ್ವಿತೀಯ ಪಿಯು ಪರೀಕ್ಷೆಯನ್ನು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ನಡೆಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ಯಾವುದೇ ಗೊಂದಲಗಳಿಗೊಳಗಾಗದಂತೆ ಪರೀಕ್ಷೆಯನ್ನು ಬರೆಯುವ ಅವಕಾಶ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲೆಯ 28 […]