ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು: ಬಸವರಾಜ ಬೊಮ್ಮಾಯಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲರಾಗಿದ್ದಾರೆ, ಅದಕ್ಕೆ ತಕ್ಕ ಹಾಗೆ ಸಶಕ್ತ ಹಾಗೂ ಘರ್ಜಿಸುವ ರೂಪದಲ್ಲಿ ನಮ್ಮ ರಾಷ್ಟ್ರದ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಸಿಂಹ ಲಾಂಛನದ ಬಗ್ಗೆ ಕಾಂಗ್ರೆಸ್ ಪಕ್ಷ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತ್ಯುತ್ತರ ನೀಡಿದರು. ಸಿಂಹದ ಲಾಂಛನ ಉಗ್ರವಾಗಿದೆ, ವ್ಯಗ್ರವಾಗಿದೆ ಎನ್ನುವುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ ನವರು ಈ ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಭಾರತಕ್ಕೆ ಈಗ […]