ಉಡುಪಿ: ಆ. 19ಕ್ಕೆ ಜನಾಶೀರ್ವಾದ ಯಾತ್ರೆಯ ಸಮಾವೇಶ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅಭಿನಂದನೆ; ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಇಂದಿನಿಂದ ಆರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ರಾಜ್ಯದಾದ್ಯಂತ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯು ಉಡುಪಿ ಜಿಲ್ಲೆಗೆ ನೂತನ […]