ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ರಾಹುಲ್ ಗಾಂಧಿ: ಕಾಂಗ್ರೆಸ್ ನಿಂದ ಮಹತ್ವದ ಘೋಷಣೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಬಹು ದೊಡ್ಡ ನಿರ್ಧಾರದಲ್ಲಿ ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಪಕ್ಷವು ಘೋಷಿಸಿದೆ. ಕಳೆದು ಕೆಲವು ದಿನಗಳಿಂದ ರಾಹುಲ್ ಗಾಂಧಿ ಅಮೇಥಿಯಿಂದ ಮರಳಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ರಾಹುಲ್ ಗಾಂಧಿಯು ಕೇರಳದ ವಯನಾಡ್ ಮತ್ತು ಅಮೇಥಿ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನುವಂತಹ ಮಾತುಗಳನ್ನು ತೇಲಿ ಬಿಡಲಾಗಿತ್ತು. ಆದರೆ ಇದೀಗ ರಾಹುಲ್ ಗಾಂಧಿ ತಮ್ಮ ತಾಯಿಯಿಂದ ತೆರವಾದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಸೋನಿಯಾಗಾಂಧಿ ರಾಜ್ಯಸಭೆ ಪ್ರವೇಶಿಸಿದ್ದು ಈ […]
ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜೆ.ಪಿ ಹೆಗ್ಡೆ ಬಿರುಸಿನ ಪ್ರಚಾರ; ದೇಗುಲ ಭೇಟಿ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ (ಏ.18) ವಿವಿಧೆಡೆ ಭೇಟಿ ನೀಡಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯ, ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯ, ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಪು ಕ್ಷೇತ್ರದ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. […]
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ “ನ್ಯಾಯ ಪತ್ರ” ಬಿಡುಗಡೆ : ಐದು ಅಂಶಗಳ ಪ್ರಣಾಳಿಕೆ; ಕೆಲಸ, ಸಂಪತ್ತು, ಕಲ್ಯಾಣಕ್ಕೆ ಒತ್ತು
ನವದೆಹಲಿ: 2024 ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ (Congress) ಪಕ್ಷವು ಶುಕ್ರವಾರ “ನ್ಯಾಯ ಪತ್ರ” ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಪ್ರಣಾಳಿಕೆಯ ಮುಖ್ಯ ವಿಷಯವೆಂದರೆ “ನ್ಯಾಯ” ಎಂದರು. ಕಳೆದ 10 ವರ್ಷಗಳಲ್ಲಿ, ವಿಶೇಷವಾಗಿ ಕಳೆದ ಐದು ವರ್ಷಗಳಲ್ಲಿ ನ್ಯಾಯದ ಪ್ರತಿಯೊಂದು ಅಂಶವು ಬೆದರಿಕೆಗೆ ಒಳಗಾಗಿದೆ ಮತ್ತು ದುರ್ಬಲಗೊಂಡಿದೆ ಎಂದು ಅವರು ಹೇಳಿದರು. “ನ್ಯಾಯ ಪತ್ರ” ಪ್ರಣಾಳಿಕೆ ಮೂರು ಪ್ರಬಲ ಪದಗಳನ್ನು ಒಳಗೊಂಡಿದೆ – “ಕೆಲಸ” “ಸಂಪತ್ತು” ಮತ್ತು “ಕಲ್ಯಾಣ”. […]
ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಮಾ.27 ಬುಧವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ಸಚಿವ, ಮಾಜಿ ಸಂಸ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ಹಾಗೂ ನಾಯಕರ ಸಮ್ಮುಖದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಯಪ್ರಕಾಶ್ ಹೆಗ್ಡೆ ಅವರಿಗೆ ಹೂಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು. […]