ಹಿರಿಯಡ್ಕ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗಾಗಿ ಮಾ.29 ರಂದು ಕಾರ್ಯಕರ್ತರ ಸಭೆ

ಹಿರಿಯಡ್ಕ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ನಡೆಯುವ ಚುನಾವಣೆ ಎಂದೇ ಬಿಂಬಿತವಾಗಿರುವ 2024ರ ಲೋಕಸಭಾ ಚುನಾವಣೆಯ ತಯಾರಿಯ ಪೂರ್ವಭಾವಿಯಾಗಿ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣಾ ಸಿದ್ಧತೆ ಮತ್ತು ರೂಪುರೇಷೆಗಳ ಬಗ್ಗೆ ಸಮಾಲೋಚಿಸುವ ಸಲುವಾಗಿ ಮಾ. 29 ರಂದು ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು […]

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್‌ ಹೆಗ್ಡೆ; ದಕ್ಷಿಣ ಕನ್ನಡಕ್ಕೆ ಆರ್‌. ಪದ್ಮರಾಜ್‌ ಹೆಸರು ಅಂತಿಮ

ಬೆಂಗಳೂರು: ಕಾಂಗ್ರೆಸ್‌ ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್‌ ಹೆಗ್ಡೆ ಮತ್ತು ದಕ್ಷಿಣ ಕನ್ನಡಕ್ಕೆ ಆರ್‌. ಪದ್ಮರಾಜ್‌ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಎರಡು ಕ್ಷೇತ್ರ ಸೇರಿ 17 ಕ್ಷೇತ್ರಗಳ ಕೈ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಇಂದು ಪಟ್ಟಿ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಸಮಿತಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ […]

ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಸೇರ್ಪಡೆ

ಉಡುಪಿ: ಮಾಜಿ ಸಂಸದ ಹಾಗೂ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆ ಪಿ ಸಿ ಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಅವರು ತಿಳಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಪೂರ್ವಾಭಾವಿ ಸಭೆ

ಉಡುಪಿ: ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ‌ ಗ್ಯಾರಂಟಿ ಸಮಾವೇಶದ ಪೂರ್ವಭಾವಿ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಾ. 8 ರಂದು ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ‌ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಇದೆಲ್ಲವನ್ನೂ ಅತ್ಯಂತ ಯಶಸ್ವಿಯಾಗಿ ರಾಜ್ಯದ ಪ್ರತಿಯೊಂದು ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದು ಮಾ. 13 ರಂದು ಎಂ.ಜಿ.ಎಂ ಮೈದಾನದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ‌ ಗ್ಯಾರಂಟಿ […]

ಬಾಂಬ್ ಸ್ಪೋಟ ವಿಚಾರದಲ್ಲಿ ರಾಜಕೀಯವಿಲ್ಲ; ಸರ್ಕಾರ ತನಿಖೆಯಲ್ಲಿ ವಿಳಂಬ ತೋರುವುದು ತರವಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು, ದೃಢಪಟ್ಟ ಮಾಹಿತಿ ನಮಗಿದೆ. ಎಲ್ಲೋ ಒಂದು ಕಡೆ ಈ ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ […]