ಡಿ.ಕೆ.ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆ: ಕ್ರಮಕ್ಕೆ ಒತ್ತಾಯಿಸಿದ ಪ್ರಹ್ಲಾದ್ ಜೋಶಿ
ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ “ಪ್ರತ್ಯೇಕ ದೇಶದ ಬೇಡಿಕೆ” ಹೇಳಿಕೆಯನ್ನು ಪ್ರಸ್ತಾಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು, ಕೆಳಮನೆಯಲ್ಲಿ ಮಾತನಾಡಿದ ಜೋಶಿ, ಲೋಕಸಭಾ ಸಂಸದರಾಗಿ ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ ಎಂದಿದ್ದಾರೆ. “ನಾನು ಸೋನಿಯಾ ಗಾಂಧಿಯವರಿಂದ ಕ್ಷಮೆಯಾಚನೆ ಮತ್ತು ಕ್ರಮಕ್ಕೆ ಒತ್ತಾಯಿಸುತ್ತೇನೆ. ಇದು ಅವರ (ಸಂಸದರಾಗಿ) ಪ್ರಮಾಣ ವಚನದ ಉಲ್ಲಂಘನೆಯಾಗಿದೆ. ವಿಷಯವನ್ನು ನೈತಿಕ ಸಮಿತಿಗೆ ಕಳುಹಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ತೆಗೆದುಕೊಳ್ಳಬೇಕು. ಅವರು ತೆಗೆದುಕೊಳದಿದ್ದರೆ ದೇಶದ […]
ಚಂಡೀಗಢದ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಗೆಲುವು; ಇಂಡಿಯಾ ಬಣಕ್ಕೆ ಸೋಲು
ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಗೆಲುವು ಸಾಧಿಸಿದ್ದು ‘ಇಂಡಿಯಾ’ ಬಣಕ್ಕೆ ಸೋಲುಂಟಾಗಿದೆ. ಚಂಡೀಗಢದಲ್ಲಿ ಮಂಗಳವಾರ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮನೋಜ್ ಸೋಂಕರ್ ಅವರು ಎಎಪಿಯ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದರು. ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಮನೋಜ್ ಸೋಂಕರ್ 16 ಮತಗಳನ್ನು ಪಡೆದರೆ, ಕುಮಾರ್ 12 ಮತಗಳನ್ನು ಪಡೆದರು. ಎಂಟು ಮತಗಳು ಅಸಿಂಧುವಾಗಿವೆ. ಹೊಸದಾಗಿ ಆಯ್ಕೆಯಾದ ಮೇಯರ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಚುನಾವಣೆ […]
ಪ.ಬಂಗಾಳ, ಪಂಜಾಬ್ ನಲ್ಲಿ “ಕೈ” ಕಿರಿಕಿರಿ: ಏಕಾಂಗಿ ಸ್ಪರ್ಧೆಗೆ ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಒಲವು
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪ. ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ತನ್ನ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಮತ್ತು ಫಲಿತಾಂಶ ಪ್ರಕಟವಾದ ನಂತರವೇ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಪರಿಗಣಿಸಲಿದೆ ಎಂದು ಉಗ್ರ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. “ನಾನು ಕಾಂಗ್ರೆಸ್ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಾನು ಅವರಿಗೆ (ಕಾಂಗ್ರೆಸ್‌ಗೆ) ಹಲವು ಪ್ರಸ್ತಾವನೆಗಳನ್ನು ನೀಡಿದ್ದೆ. ಆದರೆ ಅವರು ತಿರಸ್ಕರಿಸಿದರು. (ಉಳಿದ) ದೇಶದಲ್ಲಿ ಏನು ಮಾಡಲಾಗುವುದು […]
ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಚುನಾವಣೆ: ಡಿಕೆಶಿ
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಡ್ಡಿಪಡಿಸಿದ್ದರ ವಿರುದ್ಧ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಕೆ.ಶಿವಕುಮಾರ್, ಮೊದಲು ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆ ಬಳಿಕ ಒಂದು ಅಥವಾ ಎರಡು ತಿಂಗಳುಗಳಲ್ಲಿ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿದ್ದು ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದರು. ನಾವು 225 […]