ಅಜೆಕಾರಿನ ಕಾಂಗ್ರೆಸ್ ಕಾರ್ಯಕರ್ತ ಅರುಣ್ ಕುಲಾಲ್ ನಿಧನ

ಅಜೆಕಾರು ದೊಂಡೇರಂಗಡಿಯ ನಿವಾಸಿ ಅರುಣ್ ಕುಲಾಲ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 41 ವರ್ಷ ವಯಸಾಗಿತ್ತು. ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ದೊಂಡೇರಂಗಡಿ ಭಾಗದಲ್ಲಿ ಪಕ್ಷ ಸಂಘಟನೆ‌, ಸಾಮಾಜಿಕ‌ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.