ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲಿಗರು ಸಭ್ಯತೆ ಮೀರುತ್ತಿದ್ದಾರೆ: ವಿ.ಸುನೀಲ್ ಕುಮಾರ್
ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ಕುಮಾರ್ ಹೇಳಿದ್ದಾರೆ. ಹೇಳಿಕೆ ನೀಡಿರುವ ಅವರು, ಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು ಇಂದಿಗೂ ಅದೇ ಬದುಕನ್ನು ಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ […]