ಗ್ರಾಹಕರ ಕಣ್ಣು ಕತ್ತಲೆ ಬರಿಸುತ್ತಿದೆ ಗೃಹಜ್ಯೋತಿ: ವಿದ್ಯುತ್ ಬಳಕೆ ಹೆಚ್ಚಳದಿಂದ ಬಿಲ್ ನಲ್ಲಿ ಏರಿಕೆ ಕಂಡು ಜನ ಶಾಕ್
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ನಿರಂತರವಾಗಿ ಏರುತ್ತಿದ್ದು, ಕಳೆದ ವರ್ಷದ ಫೆಬ್ರುವರಿ–ಮಾರ್ಚ್‌ಗಿಂತ ಈ ಬಾರಿ ಗೃಹ ವಿದ್ಯುತ್ ಬಳಕೆ ಶೇ 30ರಷ್ಟು ಹೆಚ್ಚಳವಾಗಿದೆ. ಇದೀಗ ಗೃಹ ಜ್ಯೋತಿ ಫಲಾನುಭವಿಗಳಿಗೆ ಇದರ ಬಿಸಿ ತಟ್ಟಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ನಿಯಮಗಳ ಪ್ರಕಾರ ಸೌಲಭ್ಯ ಪಡೆದಿರುವ ಕುಟುಂಬಗಳು ಹಿಂದಿನ ಒಂದು ವರ್ಷ ಬಳಸಿದ್ದ ಸರಾಸರಿ ಯೂನಿಟ್ ಹಾಗೂ ಅದರ ಮೇಲೆ 10 ಹೆಚ್ಚುವರಿ ಯೂನಿಟ್ ಮಾತ್ರ ಉಚಿತವಾಗಿ ಪಡೆಯಬಹುದಾಗಿದೆ. ಅದಕ್ಕಿಂತ ಎಷ್ಟು ಹೆಚ್ಚು ಬಳಕೆ ಮಾಡಲಾಗುತ್ತದೆಯೋ ಅಷ್ಟು […]
ನಾಳೆ ಗ್ಯಾರಂಟಿ ಯೋಜನೆಗಳ ಸಮಾವೇಶ: ಪೂರ್ವಾಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ
ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 13 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ರಜತಾದ್ರಿ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾರ್ಚ್ 13 […]
ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಪೂರ್ವಾಭಾವಿ ಸಭೆ
ಉಡುಪಿ: ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶದ ಪೂರ್ವಭಾವಿ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಾ. 8 ರಂದು ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಇದೆಲ್ಲವನ್ನೂ ಅತ್ಯಂತ ಯಶಸ್ವಿಯಾಗಿ ರಾಜ್ಯದ ಪ್ರತಿಯೊಂದು ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದು ಮಾ. 13 ರಂದು ಎಂ.ಜಿ.ಎಂ ಮೈದಾನದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ […]
ಮಾ.10: ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ
ಉಡುಪಿ: ಕಾಂಗ್ರೆಸ್ ತನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ಗ್ಯಾರಂಟಿ ಯೋಜನೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಆರ್ಥಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಪ್ರಾದೇಶಿಕ ಅಭಿವೃದ್ಧಿಯ ವಿಷಯಗಳಿಗೆ ಆದ್ಯತೆ ನೀಡಿದೆ. ಈ ಬೃಹತ್ ಸಮಾವೇಶದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಮುನಿಯಾಲು […]
ಗ್ಯಾರಂಟಿಗಾಗಿ ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ವರ್ಗ; ರಾಜ್ಯಾದ್ಯಂತ ಪ್ರತಿಭಟನೆ: ದಿನಕರ ಬಾಬು
ಉಡುಪಿ: ಅಧಿಕಾರಕ್ಕೆ ಏರಲೇಬೇಕೆಂಬ ಹಪಾಹಪಿಯಿಂದ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಉಚಿತಗಳ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಇದೀಗ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಸುಮಾರು 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮಹಾ ಮೋಸ ಎಸಗಿರುವುದನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ತೀವ್ರವಾಗಿ ಖಂಡಿಸಿದರು. ಅವರು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಬಿಜೆಪಿ […]