ವಚನಭ್ರಷ್ಟ ಕಾಂಗ್ರೆಸ್ ಸರಕಾರದ ಸುಳ್ಳು ಗ್ಯಾರಂಟಿ ವಿರುದ್ದ ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ […]

ಐಟಿ-ಜಿಎಸ್‌ಟಿ ಪಾವತಿದಾರರಿಗಿಲ್ಲ ಗೃಹಲಕ್ಷ್ಮಿ ಯೋಜನೆ: ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೂ ಆಡಳಿತಾತ್ಮಕ ಅನುಮೋದನೆಯೊಂದಿಗೆ ಮಂಗಳವಾರ ಅಧಿಕೃತ ಆದೇಶ ಪ್ರಕಟವಾಗಿದೆ. ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ಮರುಪಾವತಿ ಪಡೆಯುವವರಾಗಿದ್ದಲ್ಲಿ ಅಂತಹವರಿಗೆ ಯೋಜನೆಯು ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ಮರುಪಾವತಿ ಪಡೆಯುವವರು ಈ ಯೋಜನೆಗೆ ಅರ್ಹರಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಹುತೇಕ ನೌಕರರು, ಅಧಿಕಾರಿಗಳು, ಆದಾಯ ತೆರಿಗೆ […]

ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ಧಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ […]

ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ನಿತ್ಯ ಹೋರಾಟಕ್ಕೂ ಸಿದ್ದ: ಕಾಪು ಬಿಜೆಪಿ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಸರಕಾರ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಮಾತ್ರ ಉಚಿತ ಎನ್ನುತ್ತಾ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟವಾಗಿದೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು […]

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ಯೋಜನೆಯ ಅರ್ಹತೆ ಮತ್ತು ಮಾನದಂಡಗಳು ಇಂತಿವೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 […]