ಕಾಂಗ್ರೆಸ್ ನಾಯಕರಿಂದ ಕೀಳು ಅಭಿರುಚಿಯ ಪ್ರದರ್ಶನ: ಕಾರ್ಕಳ ಬಿಜೆಪಿ
ಕಾರ್ಕಳ: ಕಾಂಗ್ರೆಸ್ ಪಕ್ಷದ ನಾಯಕರ ಹಿಂದೂ ವಿರೋಧಿ ಮಾನಸಿಕತೆಗೆ ಇನ್ನೊಂದು ಪುರಾವೆ ನಿನ್ನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಗುಂಡೂರಾವ್ ಅವರು ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಹೇಳಿ ಕಾಂಗ್ರೆಸ್ ಹಿಂದೂ ದ್ವೇಷದ ಬೆಂಕಿಗೆ ತುಪ್ಪ ಹಾಕಿದ್ದಾರೆ. ಸೋಲಿನ ಭೀತಿಯಲ್ಲಿ ಇರುವ ಕಾಂಗ್ರೆಸ್ ನಾಯಕರು ಇಂತಹ ಕೀಳು ಅಭಿರುಚಿಯ ಮಾತುಗಳನ್ನು ಆಡುತ್ತಿರುವುದನ್ನು ಕರ್ನಾಟಕದ ಪ್ರಜ್ಞಾವಂತ ಮತದಾರರು ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಭಾರತದ ಸಂತ ಪರಂಪರೆಯ ಒಂದು ಪ್ರಮುಖ […]