ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು: ಬದಲಾಯಿತು ಜಿಲ್ಲಾ ಕಚೇರಿಯ ವಾಸ್ತು?

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಕಾಮಗಾರಿ ನಡೆಯುತ್ತಿದ್ದು, ವಾಸ್ತುಶಾಸ್ತ್ರದಲ್ಲಿ ನಂಬಿಕೆ ಇಟ್ಟಿರುವ ಪಕ್ಷದ ಮುಖಂಡರೊಬ್ಬರು ಅಧ್ಯಕ್ಷರ ಅನುಮತಿ ಮೇರೆಗೆ ಈ ನವೀಕರಣ ಕಾಮಗಾರಿ ನಡೆಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್‌ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಸೇರಿದಂತೆ ಇತರ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ವಾಸ್ತುದೋಷ ನಿವಾರಣೆಗಾಗಿ ಈ ಕೆಲಸ ಮಾಡಲಾಗಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಇದನ್ನು ತಳ್ಳಿ ಹಾಕಿರುವ ಕಾಂಗ್ರೆಸ್‌, ನೀರಿನ ಟ್ಯಾಂಕಿಯ ಮತ್ತು ಮೆಟ್ಟಿಲಿನ ದುರಸ್ತಿ ಮಾಡಲಾಗಿದೆ ಎಂದಿದ್ದಾರೆ. […]