ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷ
ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ 24 ವರ್ಷಗಳ ಬಳಿಕ ಮೊದಲ ಗಾಂಧಿಯೇತರ ಮತ್ತು ನಾಲ್ಕು ದಶಕಗಳ ಬಳಿಕ ಮೊದಲ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1988 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದ ಮೂಲಕ ಸೋನಿಯಾ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರಾಗಲು ಆಹ್ವಾನಿಸಿ, ಸೀತಾರಾಮ್ ಕೇಸರಿ ಅವರನ್ನು ಅನೌಪಚಾರಿಕವಾಗಿ ಪದಚ್ಯುತಗೊಳಿಸಿದ ನಂತರ 24 ವರ್ಷಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಮೊದಲ ಗಾಂಧಿಯೇತರ ವ್ಯಕ್ತಿಯಾಗಿ […]
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅಕ್ರಮದ ಆರೋಪ ಹೊರಿಸಿದ ಶಶಿ ತರೂರ್ ತಂಡ
ನವದೆಹಲಿ: ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಉನ್ನತ ಹುದ್ದೆಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಶಿ ತರೂರ್ ನೇತೃತ್ವದ ಪಾಳಯವು ಉತ್ತರ ಪ್ರದೇಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಿಸಿದೆ. ಅಕ್ಟೋಬರ್ 19 ರಂದು, ಲೋಕಸಭಾ ಸಂಸದ ಶಶಿ ತರೂರ್ ಪರವಾಗಿ ಕಾಂಗ್ರೆಸ್ ನಾಯಕ ಸಲ್ಮಾನ್ ಸೋಜ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿವೆ ಎಂದು ಆರೋಪಿಸಿದ್ದಾರೆ. ಸೋಜ್ ತಮ್ಮ […]
ಮಲ್ಲಿಕಾರ್ಜುನ ಖರ್ಗೆ ಅವರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ: ಶಶಿ ತರೂರ್
ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ, ಅವರು ಈಗಿರುವ ಪದ್ಧತಿಯನ್ನೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ಅಖಾಡಕ್ಕಿಳಿದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ವಾದವನ್ನು ಮಂಡಿಸಿದ ಶಶಿ ತರೂರ್ ತಾವು ಆಯ್ಕೆಯಾದರೆ ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಬದಲಾವಣೆ ತರುವುದಾಗಿ ಹೇಳಿದ್ದಾರೆ. ನಾವು ಶತ್ರುಗಳಲ್ಲ, ಇದು ಯುದ್ಧವಲ್ಲ. ಇದು ನಮ್ಮ ಪಕ್ಷದ ಭವಿಷ್ಯದ ಸಮೀಕ್ಷೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮೂವರು ನಾಯಕರಲ್ಲಿ […]