ಮಂಗಳೂರು:ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ
ಮಂಗಳೂರು: ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಬಂಧನವನ್ನು ಖಂಡಿಸಿಮಂಗಳೂರಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಉತ್ತರ ಪ್ರದೇಶದಲ್ಲಿ ಆಸ್ತಿ ವಿವಾದದ ಹೆಸರಲ್ಲಿ ಗಲಭೆ ನಡೆದಿದ್ದು, ಹತ್ಯೆಯಾದ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಿಯಾಂಕಾ ಹೋಗಿದ್ದಾಗ ಅವರನ್ನು ಬಂಧಿಸಲಾಗಿದೆ. ಬಿಜೆಪಿ ಸರಕಾರದಿಂದ ಅಧಿಕಾರ ದುರ್ಬಳಕೆ ಆಗಿದೆ. ದೇಶದಲ್ಲಿ ಬಿಜೆಪಿಗರು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿಡಿಕಾರಿದರು.ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರು, ಮಹಿಳಾ ಕಾಂಗ್ರೆಸ್ ನ ಪ್ರಮುಖರು ಉಪಸ್ಥಿತರಿದ್ದರು.