ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರಕ್ಕೆ ಸೇರಿದ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ […]