ಗಾಂಧಿ ಪರಿವಾರದ ಹೊರಗಿನವರಿಗೆ ಕಾಂಗ್ರೆಸ್‌ ನಾಯಕತ್ವ: ನಾಳೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ಈ ನಡುವೆ ಕಾಂಗ್ರೆಸ್‌ನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಕ್ಷದ 23 ನಾಯಕರು ಪತ್ರ ಬರೆದು ನಾಯಕತ್ವದ ಬಿಕ್ಕಟ್ಟು ಹಾಗೂ ಆಂತರಿಕ ಚುನಾವಣೆಗೆ ಆಗ್ರಹಿಸಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಗುಲಾಂ ನಬಿ ಆಜಾದ್‌, ಆನಂದ್ ಶರ್ಮಾ, ಮನೀಶ್‌ ತಿವಾರಿ, ಮಿಲಿಂದ್ ದೇವ್ರಾ, ಜಿತಿನ್‌ ಪ್ರಸಾದ್‌ ಸೇರಿದಂತೆ 23 ನಾಯಕರು ಕಾಂಗ್ರೆಸ್‌ ಪಕ್ಷದ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತಂತೆ […]