ಕಾಂಗ್ರೆಸ್ ನ ಕಾಮಾಲೆ ಕಣ್ಣಿಗೆ ಜಗವೆಲ್ಲಾ ಹಳದಿ: ಕಿದಿಯೂರು ಉದಯಕುಮಾರ್ ಶೆಟ್ಟಿ
ಉಡುಪಿ: ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದ ಜಾಹೀರಾತುಗಳಲ್ಲಿ ಬಿಜೆಪಿ ಕರ್ನಾಟಕದ ಜನತೆಗೆ ಚೆಂಬು ನೀಡಿದೆ ಎಂದು ಪ್ರಚಾರ ಮಾಡುತ್ತಿರುವುದು, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಅವರು ಉಡುಪಿ ವಿಧಾನಸಭಾ ಕ್ಷೇತ್ರದ ದೊಡ್ಡಣಗುಡ್ಡೆಯ ಮಣೋಲಿಗುಜ್ಜಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು ನಾಲ್ಕು ತಲೆಮಾರುಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ […]
ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]
ಮೂವರು ಉಪಮುಖ್ಯಮಂತ್ರಿಗಳ ನೇಮಕ ಊಹಾಪೋಹ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಸಂಪುಟದ ಒಳಗಿನಿಂದ ಧ್ವನಿ ಎತ್ತುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರದಂದು ಹೈಕಮಾಂಡ್ ಈ ಬಗ್ಗೆ ಅಂತಿಮವಾಗಿ ನಿರ್ಧರಿಸುತ್ತದೆ ಮತ್ತು ನಿರ್ಧಾರವನ್ನು ಪಾಲಿಸುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಇನ್ನೂ ಮೂರು ಡಿಸಿಎಂಗಳನ್ನು ಹೊಂದುವ ಆಲೋಚನೆಯನ್ನು ಸಹಕಾರ ಸಚಿವ ಕೆ ಎನ್ ರಾಜಣ್ಣ ಶನಿವಾರ ತೇಲಿಬಿಟ್ಟಿದ್ದರು ಮತ್ತು 2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ಹೇಳಿದ್ದರು. ಇದು ಸಚಿವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಇದನ್ನು ಪಕ್ಷದ […]
ಹೊಸ ಸರ್ಕಾರದ ‘ಕಾರು’ ಬಾರು: 33 ಸಚಿವರಿಗೆ ಹೊಸ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಎಸ್‌ಯುವಿ ಖರೀದಿಸಲು 10 ಕೋಟಿ ಖರ್ಚು
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 33 ಟೊಯೊಟಾ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಎಸ್‌ಯುವಿಗಳನ್ನು ಖರೀದಿಸಲಿದೆ ಎಂದು ವರದಿಯಾಗಿದೆ. 33 ಸಚಿವರಿಗೆ ತಲಾ ಒಂದು ಗಾಡಿಯಂತೆ 9.9 ಕೋಟಿ ರೂ ಬಜೆಟ್ ಅನ್ನು ನಿಗದಿಪಡಿಸಲಾಗಿದೆ. ಈ ನೇರ ಖರೀದಿಗೆ ಅನುಕೂಲವಾಗುವಂತೆ, ಕರ್ನಾಟಕ ಟ್ರಾನ್ಸ್ಪೆರೆನ್ಸಿ ಪಬ್ಲಿಕ್ ಪ್ರೊಕ್ಯೂರ್ ಮೆಂಟ್ (ಕೆಟಿಪಿಪಿ) ಕಾಯಿದೆಯಡಿಯಲ್ಲಿ 4(ಜಿ) ವಿನಾಯಿತಿಯನ್ನು ನೀಡಲಾಗಿದ್ದು, ಇದು ಟೆಂಡರ್‌ಗಳಿಲ್ಲದೆ ಗುತ್ತಿಗೆಗಳನ್ನು ನೀಡಲು ಸಹಾಯಮಾಡುತ್ತದೆ. ನೂತನ ಸಚಿವರಿಗಾಗಿ ಅತ್ಯಾಧುನಿಕ ಎಸ್ ಯುವಿಗಳಿಗೆ ಇಷ್ಟು ದೊಡ್ಡ ಮೊತ್ತವನ್ನು ವ್ಯಯಿಸಿರುವುದು ಕೆಲವೆಡೆ ಟೀಕೆಗೆ […]
ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ ಮುಂದುವರಿದರೆ ಕಾಂಗ್ರೆಸ್ ವಿರುದ್ದ ರಾಜ್ಯಾದ್ಯಂತ ಉಗ್ರ ಹೋರಾಟ: ಹಿಂಜಾವೇ ಎಚ್ಚರಿಕೆ
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುತ್ತಿರುವ ಸರಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಅವರ ಮೇಲೆ ವಿನಾ ಕಾರಣ ಕೇಸ್ ದಾಖಲಿಸುವುದು ಮುಂತಾದವುಗಳನ್ನು ಮಾಡುತ್ತಿದೆ. ಮಾತ್ರವಲ್ಲ ಹಿಂದೂ ಸಂಘಟನೆಯ ಕೆಲಸಗಳಿಗೆ ತೊಂದರೆ ನೀಡುತ್ತಿದ್ದು ಸಿದ್ದರಾಮಯ್ಯ ಸರಕಾರ ಹಿಂದೂ ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇದೇ ರೀತಿ ದೌರ್ಜನ್ಯ ಮುಂದುವರಿದೆ ಕಾಂಗ್ರೆಸ್ […]