ಕಾಂಗ್ರೆಸ್ ಈ ಬಾರಿ ದೊಡ್ಡಮಟ್ಟದಲ್ಲಿ ಗೆಲ್ಲಲಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಇಂದು ಕಾಂಗ್ರೆಸ್ ಗೆ ಪೂರಕ ವಾತಾವರಣವಿದೆ. ಕಾಂಗ್ರೆಸ್ ಗೆಲುವಿಗೆ ಈ ಬಾರಿ ದೊಡ್ಡಮಟ್ಟದಲ್ಲಿ ಅವಕಾಶವಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ನ ಬೂತ್ ಅಧ್ಯಕ್ಷರ ಮತ್ತು ಬಿ ಎಲ್ ಎ 2 ಮತ್ತು ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಲೋಕಸಭಾ ಸದಸ್ಯ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿಗಳಾದ ಪ್ರತಾಪನ್, ಕೇರಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೌಷಾದ್, […]
ಬಿಜೆಪಿ-ಕಾಂಗ್ರೆಸ್ ಚುನಾವಣಾ ಕದನ ತಾರಕಕ್ಕೆ: ಬಜರಂಗ ದಳ ನಿಷೇಧ ಪ್ರಸ್ತಾಪಕ್ಕೆ ಎಲ್ಲೆಡೆ ಆಕ್ರೋಶ; ಸಾಮಾಜಿಕ ಜಾಲತಾಣದಲ್ಲಿ ಭಜರಂಗಿ ಕ್ಯಾಂಪೇನ್ ವೈರಲ್!

ಬೆಂಗಳೂರು: ಬಿಜೆಪಿ-ಕಾಂಗ್ರೆಸ್ ಮಧ್ಯೆ ಚುನಾವಣಾ ಕದನ ತಾರಕ್ಕೇರಿದ್ದು, ಮಂಗಳವಾರದಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ತನ್ನ ಪ್ರಣಾಳಿಕೆಯಲ್ಲಿ ಪಿ.ಎಫ್.ಐ ಮತ್ತು ಬಜರಂಗದಳವನ್ನು ಸಮೀಕರಿಸಿದ್ದ ಕಾಂಗ್ರೆಸ್ ಈ ಸಂಘಟನೆಗಳಿಗೆ ನಿಷೇಧ ಹೇರುವ ಬಗ್ಗೆ ಘೋಷಣೆ ಮಾಡಿತ್ತು. ಇದರಿಂದ ಆಕ್ರೋಶಗೊಂಡ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್ ವಿರುದ್ದ ಕಿಡಿಕಾರಿವೆ. ಕಾಂಗ್ರೆಸ್ ನ ಬಜರಂಗದಳ ನಿಷೇಧ ಭರವಸೆಗೆ ಇತ್ತ ಬಿಜೆಪಿ ನಾಯಕರು ಕೂಡಾ ಸಿಡಿದೆದ್ದಿದ್ದಾರೆ. ತಮ್ಮ ಪ್ರೊಫೈಲ್ ಫೋಟೋ, ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ […]
ಎನ್‌ಸಿಪಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ, ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಶರದ್ ಪವಾರ್ ಘೋಷಣೆ

ಮುಂಬಯಿ: ಅನುಭವಿ ಹಾಗ್ಊ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಎರಡು ದಶಕಗಳ ಹಿಂದೆ ತಾವೇ ಕಟ್ಟಿ ಬೆಳೆಸಿದ ಪಕ್ಷದ ಚುಕ್ಕಾಣಿಯನ್ನು ಈ ಮೂಲಕ ಬಿಟ್ಟುಕೊಟ್ಟರು. ನಾನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪವಾರ್ ತಮ್ಮ ಆತ್ಮಚರಿತ್ರೆಯ ‘ಲೋಕ್ ಮಾಝೆ ಸಂಗತಿ’ಯ ಎರಡನೇ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಹೇಳಿದರು. ಮಹಾರಾಷ್ಟ್ರ ರಾಜಕೀಯದ ಧೀಮಂತ ನಾಯಕ, 82 ವರ್ಷದ ಪವಾರ್ ಅವರು ಇನ್ನು ಮುಂದೆ […]
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ

ಹೊಸಬೆಟ್ಟು: ಮುಲ್ಕಿ-ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಚ್ಚೆಮೊಗರು, ಹೊಸಬೆಟ್ಟು ಹಾಗೂ ಹಿದಾಯತ್ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಯ ಯೋಜನೆಗಳ ಕುರಿತು ಗ್ಯಾರಂಟಿ ಕಾರ್ಡ್ ಗಳನ್ನು ಮನೆಮನೆಗೆ ಭೇಟಿ ನೀಡಿ ವಿತರಿಸಿದರು.
ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಸುಬೀತ್ ಎನ್.ಆರ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿತರಿದ್ದರು.