ಬಂಟ್ವಾಳ: ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಹಿರಿಯ ನಾಯಕನ ಆರೋಗ್ಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಇಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ […]

ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ: ಬಂಡಾಯದ ಸುಳಿವು ನೀಡಿದ ಬಾವ

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು 5ನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಭಾರೀ ಕುತೂಹಲ ಹುಟ್ಟಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಇಳಿಸಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಇಬ್ಬರ ಮಧ್ಯೆ ಟಿಕೆಟ್ ಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಇದೀಗ ಕಾಂಗ್ರೆಸ್ ಹೈಕಮಾಂಡ್ ಇನಾಯತ್ ಅಲಿ […]

ಕೊಕರ್ಣೆ: ಗ್ರಾ.ಪಂವ್ಯಾಪ್ತಿಯ 3 ರಿಂದ 10 ನೇ ವಾರ್ಡ್ ಗಳ ಚುನಾವಣಾ ಪೂರ್ವಭಾವಿ ಸಭೆ

ಕೊಕ್ಕರ್ಣೆ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಇಂದು ಕೊಕ್ಕರ್ಣೆ ಗ್ರಾ.ಪಂ ವ್ಯಾಪ್ತಿಯ ಕಾಂಗ್ರೆಸ್ ಮುಖಂಡ ವೆಂಕಟೇಶ್ ಸುವರ್ಣ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಸಾದ್ ರಾಜ್ ಕಾಂಚನ್, ತಾ.ಪಂ. ಸದಸ್ಯೆ ಡಾ.ಅನಿತಾ ಶೆಟ್ಟಿ, ಗ್ರಾ.ಪಂ ಸದಸ್ಯ ನರಸಿಂಹ ಪೂಜಾರಿ, ಜಿ.ಪಂ. ಸದಸ್ಯ ಸುಧಾಕರ ಶೆಟ್ಟಿ ಮೇರ್ಮಾಡಿ, ಆನಂದ ಮರಕಾಲ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಬೆಳ್ತಂಗಡಿ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.  

ಬೈಂದೂರು: ಕಾಂಗ್ರೆಸ್ ಕೈ ಹಿಡಿದ ಕಮಲ ಕಾರ್ಯಕರ್ತರು

ಬೈಂದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್‌ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಕಳೆದೊಂದು ತಿಂಗಳಿನಿಂದ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಪಕ್ಷದ ಬಾವುಟಗಳನ್ನು ಹಿಡಿದಿದ್ದಾರೆ. ಕಟ್‌ ಬೇಲ್ತೂರಿನ ಬಿಜೂರು 3ನೇ ಹಾಗೂ 4ನೇ ವಾರ್ಡ್ ನ ಸಕ್ರಿಯ ಬಿಜೆಪಿಯ ಕಾರ್ಯಕರ್ತರು ಬಿಜೂರು ವಜ್ರದುಂಬಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ದೇವಾಡಿಗ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸರಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್‌ ಪಕ್ಷದ ಬಾವುಟ ನೀಡಿ, ಪಕ್ಷದ […]