ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಶೆಟ್ಟಿ ನೇಮಕ

ಕಾರ್ಕಳ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೃಷ್ಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸದಾಶಿವ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುತೂಹಲದ ಕಣವಾದ ಕಾರ್ಕಳ ಚುನಾವಣಾ ಕ್ಷೇತ್ರ: ಕಾಂಗ್ರೆಸ್ ನಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಕಣಕ್ಕೆ

ಕಾರ್ಕಳ: ಈ ಬಾರಿ ಕಾರ್ಕಳದ ಚುನಾವಣಾ ಕಣ ತೀವ್ರ ಕುತೂಹಲ ಮೂಡಿಸಿದೆ. ಒಂದೆಡೆ ಬಿಜೆಪಿಯ ಸುನಿಲ್ ಕುಮಾರ್, ಮತ್ತೊಂದೆಡೆ ಶ್ರೀ ರಾಮ ಸೇನೆ ಯ ಪ್ರಮೋದ್ ಮುತಾಲಿಕ್ ಎದುರು ಬದುರಾಗಿದ್ದರೆ, ಇದೀಗ ಪ್ರತಿಪಕ್ಷ ಕಾಂಗ್ರೆಸ್ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ನೀಡಿದೆ. ಈ ಬಾರಿ ಕಾರ್ಕಳದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಜಯ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎನ್ನುವುದು ಮತ ಎಣಿಕೆಯ ದಿನದಂದು ಗೊತ್ತಾಗಲಿದೆ.
ಏ.17 ರಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಏ.17 ರಂದು ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಮನೆಗ ತೆರಳಿ ಅಲ್ಲಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ವರೆಗೆ ಅಭಿಮಾನಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ

ಬಂಟ್ವಾಳ : ಸಾಮಾಜಿಕ ಬದ್ಧತೆಯ ಸೈದ್ಧಾಂತಿಕ ರಾಜಕಾರಣ ಮಾಡಿಕೊಂಡು ಬಂದವನು ನಾನು. ಯಾವುದೇ ಧರ್ಮ, ಜಾತಿ ತಾರತಮ್ಯ ಮಾಡದೆ ಎಲ್ಲಾ ವರ್ಗಗಳನ್ನು ಸಮಾನತೆಯಿಂದ ನೋಡಿದವನು. ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನಸೇವೆ ಮಾಡುತ್ತೇನೆ ಎಂದು ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ತಮ್ಮ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ರಮಾನಾಥ […]
ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]