ಪ್ರಸ್ತುತ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ರದ್ದು ಮಸೂದೆ ಮಂಡನೆ ಇಲ್ಲ: ವರದಿ

ಬೆಂಗಳೂರು: ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಬಲವಂತದ ಮತಾಂತರ ನಿಷೇಧ ಕಾನೂನು ಮಸೂದೆಯನ್ನು ರದ್ದುಗೊಳಿಸುವ ಜೂನ್ 15 ರ ಕ್ಯಾಬಿನೆಟ್ ನಿರ್ಧಾರದ ಹೊರತಾಗಿಯೂ ರಾಜ್ಯ ವಿಧಾನಮಂಡಲದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸದಿರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕೆಲವು ದಿನಗಳ ಹಿಂದೆ ಸಿದ್ಧಪಡಿಸಿದ ಕರಡು ಮಸೂದೆಯನ್ನು ಸರ್ಕಾರವು ಹಿಂತೆಗೆದುಕೊಂಡಿದೆ […]

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ ಎಂದು ಮಂಗಳವಾರ ಅವರ ಕುಟುಂಬ ಮತ್ತು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಘೋಷಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಘೋಷಿಸಿತು. ಕೇರಳದ ಮಾಜಿ ಮುಖ್ಯಮಂತ್ರಿ ನಿಧನದ ಸುದ್ದಿಯನ್ನು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. ಕೆಲ ದಿನಗಳಿಂದ […]

ಕಾಂಗ್ರೆಸ್ ನದ್ದು ನಿರಾಶಾದಾಯಕ ಗೊಂದಲಭರಿತ ಬಜೆಟ್: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದ್ದು, ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವೀರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, […]

ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೋಮವಾರದಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಚೇರಿಯ ಸಿಬ್ಬಂದಿಗಳು ಶಾಸಕರ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಯಾವುದೇ ಕೆಲಸ ಮಾಡಲು 30 ಲಕ್ಷ ರೂ.ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಬಗ್ಗೆ ಸುಳಿವು ನೀಡಿದ ಅವರು ಈ ಸರ್ಕಾರದಲ್ಲಿ ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ. ಒಂದೊಂದು ಇಲಾಖೆಯಲ್ಲಿ ಒಂದೊಂದು ಸಿಂಡಿಕೇಟ್ ಇರುತ್ತದೆ. ಯಾರನ್ನು […]

ಕೆಜಿಎಫ್ ಹಾಡು ಹಕ್ಕುಸ್ವಾಮ್ಯ ಚ್ಯುತಿ ಆರೋಪ: ಕಾಂಗ್ರೆಸ್ ನಾಯಕರ ಮೇಲಿನ ಎಫ್ಐಆರ್ ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಕಾರ

ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಕೆಜಿಎಫ್ ಅಧ್ಯಾಯ 2 ರ ಸಂಗೀತದ “ಅನಧಿಕೃತ” ಬಳಕೆ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಟೆ ವಿರುದ್ಧದ ಎಫ್ಐಆರ್ ಅನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ನವೆಂಬರ್ 2022 ರಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಕೆಜಿಎಫ್ ಅಧ್ಯಾಯ 2 ರ ಸಂಗೀತವನ್ನು ಅನಧಿಕೃತವಾಗಿ ಬಳಸಲಾಗಿದೆ ಎಂದು ಎಂ.ಆರ್.ಟಿ ಸಂಗೀತ ಕಂಪನಿ ನೀಡಿದ ದೂರಿನ […]