ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ನಿರ್ಧಾರ; ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ […]

ಮತಾಂತರ ನಿಷೇಧ ತಿದ್ದುಪಡಿ ರದ್ದು; ಪಠ್ಯ ಬದಲಾವಣೆ: ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸುನಿಲ್ ಕುಮಾರ್

ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್‌ ಮತ್ತು ಹೆಡ್ಗೆವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ‌ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ […]

ಮತಾಂತರ ವಿರೋಧಿ ಕಾನೂನು ತಿದ್ದುಪಡಿಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರವು ಮತಾಂತರ ವಿರೋಧಿ ಕಾನೂನಿಗೆ ಜಾರಿಗೆ ತಂದ ತಿದ್ದುಪಡಿಗಳನ್ನು ರದ್ದುಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ. ಪಾಟೀಲ್ ಪ್ರಕಾರ, ಜುಲೈ 5 ರಿಂದ ಪ್ರಾರಂಭವಾಗುವ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ “ಮತಾಂತರ ವಿರೋಧಿ ಮಸೂದೆಗೆ ಮಾಡಲಾದ ಬದಲಾವಣೆಗಳನ್ನು ರದ್ದುಗೊಳಿಸಲಾಗುವುದು”. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮಸೂದೆ, 2021, ಪ್ರಕಾರ ತಪ್ಪು ನಿರೂಪಣೆ, ಬಲವಂತ, ವಂಚನೆ, ಆಮಿಷ ಅಥವಾ ಮದುವೆಯ […]

ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]

ಕಾಪು: ರಕ್ಷಿತ್ ಕೋಟ್ಯಾನ್ ಹಲ್ಲೆ ಪ್ರಕರಣ; ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕೃತ್ಯ ಎಸಗಿರುವುದು ಕಂಡು ಬಂದಿದೆ. ತಾವು […]