ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಪಾದಯಾತ್ರಯಲ್ಲಿ ಬಂದು ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ…!!
ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಇದ್ದರು.