ಮಂಗಳೂರು: ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆ; ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಂಗಣ್ಣಿನ ಸಮಸ್ಯೆ ಉತ್ತುಂಗದಲ್ಲಿದ್ದು, ಶೇ 40 ರಷ್ಟು ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆಯ ಬಗ್ಗೆ ವರದಿಯಾಗಿದೆ. ಈ ಬಗ್ಗೆ ದ.ಕ ಜಿಲ್ಲೆಯ ಆಯೋಗ್ಯ ಇಲಾಖೆಯು ಜ್ಞಾಪನಾ ಪತ್ರವನ್ನು ಹೊರಡಿಸಿದ್ದು, ಕಾಯಿಲೆಗೆ ಒಳಗಾದ ಮಕ್ಕಳನ್ನು ಐದು ದಿನಗಳವರೆಗೆ ಶಾಲೆಗೆ ಕಳುಹಿಸದಂತೆ ಸೂಚನೆ ನೀಡಿದೆ. ಕೆಂಗಣ್ಣು ಒಬ್ಬರಿಂದ ಮತ್ತೊಬ್ಬರಿಗೆ ಶೀಘ್ರವಾಗಿ ಹರಡುವ ರೋಗವಾಗಿದ್ದು, ಸಾಮಾನ್ಯವಾಗಿ 3 ರಿಂದ 5 ದಿನಗಳಲ್ಲಿ ಗುಣಮುಖವಾಗುತ್ತದೆ. ಮಕ್ಕಳ ಪೋಷಕರು ಕೆಂಗಣ್ಣಿನ ಸಮಸ್ಯೆ ಬಗ್ಗೆ ಶಾಲೆಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. […]