ಸಂವಿಧಾನದ ಕರ್ತವ್ಯಗಳನ್ನು ಪಾಲಿಸಿ ಉತ್ತಮ ಪ್ರಜೆಗಳಾಗಿ: ಅಪರ ಜಿಲ್ಲಾಧಿಕಾರಿ

ಉಡುಪಿ: ನಾಗರಿಕರು ಸಂವಿಧಾನದಡಿಯಲ್ಲಿ ನೀಡಿರುವ ಹಕ್ಕುಗಳನ್ನು ಪಡೆದುಕೊಳ್ಳುವ ರೀತಿಯಲ್ಲಿಯೇಸಂವಿಧಾನದ ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಜಿಲ್ಲೆಯಾದ್ಯಂತ […]