ಅಂಬೇಡ್ಕರ್ ಅವರಿಂದ ಎಲ್ಲಾ ಕಾಲಕ್ಕೂ, ಎಲ್ಲರಿಗೂ ಸೌಲಭ್ಯ ನೀಡುವ ಸಂವಿಧಾನ ರಚನೆ: ಉಸ್ತುವಾರಿ ಸಚಿವ ಅಂಗಾರ

ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಅವರು ತಾನು ಅನುಭವಿಸಿದ ಬಡತನ, ಅಸಮಾನತೆಯ ನೋವುಗಳನ್ನು ಅರಿತು, ಸಂವಿಧಾನ ರಚನಾ ಸಮಯದಲ್ಲಿ, ದೇಶದಲ್ಲಿ ಎಲ್ಲಾ ಕಾಲಕ್ಕೂ ಪ್ರತಿಯೊಬ್ಬರಿಗೂ ಅನುಕೂಲವಾಗುವಂತಹ ಸೌಲಭ್ಯಗಳು ದೊರೆಯುವ ರೀತಿಯಲ್ಲಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದು ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಎಸ್. ಅಂಗಾರ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಟಲ್ ಬಿಹಾರಿ […]