ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿರ್ಮಾಣ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹವನ್ನು ನಿರ್ಮಾಣ ಮಾಡಲು, ನಿಗದಿತ ಶುಲ್ಕ ಪಾವತಿ […]