ನ.12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

ನವದೆಹಲಿ: ದೇಶದ ವಿವಿಧ ಆಯೋಗಗಳ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಈ ವರ್ಷ ನವೆಂಬರ್ 12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು, ದೇಶದಲ್ಲಿ ಸುಮಾರು ಆರು ಲಕ್ಷ ಎಂಟು ಸಾವಿರ ಗ್ರಾಹಕ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದೆ. ಲೋಕ ಅದಾಲತ್ ವ್ಯವಸ್ಥೆ ಮತ್ತು ಕಕ್ಷಿದಾರರ ನಡುವಿನ ಪರಸ್ಪರ ಇತ್ಯರ್ಥದ ಪ್ರಯೋಜನಗಳನ್ನು ಪರಿಗಣಿಸಿ ಹೆಚ್ಚಿನ ಸಂಖ್ಯೆಯ ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡುವ ನಿರೀಕ್ಷೆಯಿದೆ […]