ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕ ಸುರಕ್ಷತೆಗೆ ಕ್ರಮ ವಹಿಸಿ.
ಉಡುಪಿ: ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ನಿರ್ಮಾಣದಾರರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯಿದೆ, 1996 ಹಾಗೂ ಕರ್ನಾಟಕ ನಿಯಮಗಳು 2006 ರಡಿ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆ ವಹಿಸುವುದು ನಿರ್ಮಾಣದಾರರ ಜವಬ್ದಾರಿಯಾಗಿರುತ್ತದೆ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಕಾಮಗಾರಿ ಆರಂಭ ಮಾಡಿರುವ ಸ್ಥಳಗಳಲ್ಲಿ ಭೂಕುಸಿತ, ಅಪಘಾತ ಹಾಗೂ ಅವಘಡ ಉಂಟಾಗದಂತೆ ಸೂಕ್ತ ಕ್ರಮಗಳನ್ನು ತಕ್ಷಣ ತೆಗೆದುಕೊಂಡು ಯಾವುದೇ ಕಾರ್ಮಿಕರ ಜೀವ […]
ಮನೆ ನಿರ್ಮಾಣ, ಉಡುಪಿ ಜಿಲ್ಲೆಯಲ್ಲಿ ಮಳೆ ಕೊಯ್ಲು ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ, ಜುಲೈ 10: ಜಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಮಳೆ ನೀರು ಮರು ಪೂರಣ ಯೋಜನೆ ಕಡ್ಡಾಯ ಗೊಳಿಸಲಾಗಿದೆ. ಇಲ್ಲದಿದ್ದರೆ, ಮನೆ ನಿರ್ಮಾಣ ನಂತರ ಕಂಪ್ಲೀಷನ್ ಸರ್ಟಿಫಿಕೇಟ್(ಸಿಸಿ) ಸಿಗುವುದಿಲ್ಲ. ಭಾರತ ಸರ್ಕಾರವು ಜಲಭದ್ರತೆಗಾಗಿ “ಜಲ ಶಕ್ತಿ ಅಭಿಯಾನ” ಎಂಬ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಬುಧವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ […]