ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಯಾವುದೇ ಕಾರಣಕ್ಕೂ ರಾಜೀನಾಮೆ‌‌ ಕೊಡಲ್ಲ: ಈಶ್ವರಪ್ಪ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದರಲ್ಲಿ ಷಡ್ಯಂತ್ರವಿದ್ದು, ಈ ಬಗ್ಗೆ ತನಿಖೆ ನಡೆಯಬೇಕು. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಗ್ರ ತನಿಖೆ ನಡೆಸಲು ಮನವಿ ಮಾಡಿದ್ದೇನೆ. ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುವೆ ಎಂದು ಅವರು ಹೇಳಿದರು. ಕಾನೂನು ಬಾಹಿರವಾಗಿ […]