ಇಸ್ರೇಲ್ ದೇಶದಲ್ಲಿರುವ ನಾಗರಿಕರ ಮಾಹಿತಿಗಾಗಿ ಕಂಟ್ರೋಲ್ ರೂಂ ಸಂಪರ್ಕಿಸಿ
ಉಡುಪಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820- 2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆಗಾಲದ ತುರ್ತು ಸಂದರ್ಭಕ್ಕಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳು ಇಂತಿವೆ
ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ […]
ಕಾಪು: ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಕಂಟ್ರೋಲ್ ರೂಂ ಸ್ಥಾಪನೆ
ಉಡುಪಿ: ಕಾಪು ತಹಶೀಲ್ದಾರರ ಕಚೇರಿಯಲ್ಲಿ ಮಳೆಗಾಲದ ಸಮಯದಲ್ಲಿ ಹಾನಿ ಮತ್ತು ಪ್ರಾಕೃತಿಕ ವಿಕೋಪಗಳ ನಿರ್ವಹಣೆಗಾಗಿ ದಿನದ 24 ಗಂಟೆಯೂ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜನಿಕರು ದೂ.ಸಂ. 0820-2551444 ನ್ನು ಸಂಪರ್ಕಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಪು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕೋಪಗಳಿಂದ ತೊಂದರೆಗೊಳಗಾದವರು ತುರ್ತು ಪರಿಹಾರಕ್ಕಾಗಿ ಉಚಿತ ಸಹಾಯವಾಣಿಗೆ ಕರೆ ಮಾಡಿ: ಜಿಲ್ಲಾಧಿಕಾರಿ
ನೆರೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ತೊಂದರೆಗೊಳಗಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077, ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.