ಮಂಗಳೂರು: ಬಲವಂತದ ಮತಾಂತರ ಪ್ರಕರಣ; ಮೂವರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಬಾಲಕಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ಮಹಿಳಾ ವೈದ್ಯೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಶಿವಾನಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಖಲೀಲ್, ಡಾ ಜಮೀಲಾ ಮತ್ತು ಐಮನ್ ವಿರುದ್ಧ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯ್ದೆ 2022 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, ಶಿವಾನಿ ಖಲೀಲ್ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ತನ್ನ ಮೊಬೈಲ್ ಫೋನ್ ರೀಚಾರ್ಜ್ ಮಾಡುತ್ತಿದ್ದಳು. […]